Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಸ್ತಿ ಮಾರಾಟ-ಖರೀದಿಗೆ ಮಾರ್ಗಸೂಚಿ...

ಆಸ್ತಿ ಮಾರಾಟ-ಖರೀದಿಗೆ ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ1 Jan 2022 8:25 PM IST
share
ಆಸ್ತಿ ಮಾರಾಟ-ಖರೀದಿಗೆ ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ: ಸಚಿವ ಆರ್.ಅಶೋಕ್

ಬೆಂಗಳೂರು, ಜ.1: ಸ್ಥಿರಾಸ್ತಿಗಳ ಮಾರಾಟ ಮತ್ತು ಖರೀದಿ ಮಾಡುವವರಿಗೆ ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಪ್ರಕಟಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಥಿರಾಸ್ತಿಗಳಾದ ಕೃಷಿ ಭೂಮಿ, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಅಪಾರ್ಟ್‍ಮೆಂಟ್‍ಗಳು, ಫ್ಲ್ಯಾಟ್‍ಗಳು, ಭೂ ಪರಿವರ್ತಿತ ಜಮೀನುಗಳ ಮಾರಾಟ ಮತ್ತು ಖರೀದಿ ಮಾಡುವವರಿಗೆ 2022ರ ಜ. 1ರಿಂದ ಮಾರ್ಚ್ 31ರವರೆಗೆ ಮಾರ್ಗಸೂಚಿ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಿದೆ ಎಂದು ತಿಳಿಸಿದರು.

ಕೊರೋನ ಸಾಂಕ್ರಾಮಿಕ ಕಾರಣದಿಂದ ಎರಡು ವರ್ಷಗಳಿಂದ ಜನರು ಸಂಕಷ್ಟದಲ್ಲಿದ್ದು, ಅವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಈ ತೀರ್ಮಾನ ಮಾಡಿದೆ. ಆಯಾ ಪ್ರದೇಶದ ಮಾರ್ಗಸೂಚಿ ದರವನ್ನು ಆಧರಿಸಿ ಈ ರಿಯಾಯಿತಿ ಅನ್ವಯವಾಗಲಿದೆ. ಎಲ್ಲ ರೀತಿಯ ಆಸ್ತಿಗಳ ನೋಂದಣಿಗೆ ಈ ರಿಯಾಯಿತಿ ಅನ್ವಯಿಸಲಿದೆ ಎಂದು ಸಚಿವ ಅಶೋಕ್ ಸ್ಪಷ್ಟಣೆ ನೀಡಿದರು.

ಆಸ್ತಿ ಮಾರಾಟ ಮತ್ತು ಖರೀದಿಸುವ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಈ ತೀರ್ಮಾನ ಮಾಡಿದ್ದು ಕೇವಲ ಮೂರು ತಿಂಗಳು ಮಾತ್ರ ಈ ಅವಕಾಶ ನೀಡಲಾಗಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಸಮಾಲೋಚನೆ ನಡೆಸಿ ನಿರ್ಧಾರ ಮಾಡಲಾಗಿದೆ. ಇದರಿಂದ ಜನರಿಗೆ ಅನುಕೂಲ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಅವರು ತಿಳಿಸಿದರು.

ಆದೇಶ: ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ 2019-20ನೆ ಸಾಲಿನಿಂದ ರಾಜಸ್ವ ಸಂಗ್ರಹದಲ್ಲಿ ಒಟ್ಟು 2,101 ಕೋಟಿ ರೂ.ಗಳಷ್ಟು ಕೊರತೆ ಉಂಟಾಗಿದ್ದು, ಹೀಗಾಗಿ ರಾಜಸ್ವ ಹೆಚ್ಚಳಕ್ಕಾಗಿ ಹೊಸದಿಲ್ಲಿಯಲ್ಲಿ ನಿರ್ದಿಷ್ಟ ಅವಧಿಗೆ ಶೇ.20ರಷ್ಟು ಮಾರ್ಗಸೂಚಿ ದರವನ್ನು ಕಡಿಮೆ ಮಾಡಲಾಗಿದೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದೇ ಮಾದರಿಯಲ್ಲಿ ಶೇ.10ರಷ್ಟು ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಕಡಿತಗೊಳಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

ಜ.1ರಿಂದ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿದ್ದು, ದಸ್ತಾವೇಜುಗಳ ನೋಂದಣಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿ ದರದ ಶೇ.10ರಷ್ಟು ಕಡಿಮೆ ಮಾಡಲಾಗಿದ್ದು, 2022ರ ಜನವರಿ 1ರಿಂದ ಮಾರ್ಚ್ 31ರ ವರೆಗೆ ಮಾರ್ಗಸೂಚಿ ದರಗಳೆಂದು ಪರಿಗಣಿಸಬಹುದಾಗಿದೆ ಎಂದು ನೋಂದಣಿ ಇಲಾಖೆ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಪಾದಯಾತ್ರೆ ಗಿಮಿಕ್: ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್ ಕೈಗೊಳ್ಳಲು ಉದ್ದೇಶಿಸಿರುವ ಪಾದಯಾತ್ರೆ ರಾಜಕೀಯ ಗಿಮಿಕ್ ಅಷ್ಟೇ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ಆರು ವರ್ಷದ ಅವಧಿಯಲ್ಲಿ ಏನೂ ಮಾಡದೇ ಇದೀಗ ಜನರ ಅನುಕಂಪ ಗಿಟ್ಟಿಸಲು ಪಾದಯಾತ್ರೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X