ವಿಶ್ವಗುರು ಆಗಬೇಕೆಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ: ಕುಮಾರಸ್ವಾಮಿ ಪ್ರಶ್ನೆ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ಮಾಜಿ ಸಿಎಂ ಒತ್ತಾಯ
ಬೆಂಗಳೂರು: ''ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14,500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11,000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ'' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ''ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ?'' ಎಂದು ಪ್ರಶ್ನಿಸಿದ್ದಾರೆ.
''ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ'' ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022