-

ಮಕ್ಕಳ ಲಸಿಕೀಕರಣದ ಜವಾಬ್ದಾರಿಯನ್ನ ಆಯಾ ತರಗತಿಯ ಶಿಕ್ಷಕರಿಗೆ ವಹಿಸಲು ಸೂಚನೆ: ಸಚಿವೆ ಶಶಿಕಲಾ ಜೊಲ್ಲೆ

-

ವಿಜಯಪುರ, ಜ.12: ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚಿನ ಸೋಂಕು ತಗಲುವ ಸಾಧ್ಯತೆಯನ್ನು ತಜ್ಞರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮೂರನೇ ಅಲೆಯಲ್ಲಿ ಒಟ್ಟಾರೆಯಾಗಿ 50 ಮಕ್ಕಳು ಕೋವಿಡ್ ಸೊಂಕಿಗೆ ತುತ್ತಾಗಿದ್ದಾರೆ. ಈ ನಿಟ್ಟಿನಲ್ಲಿ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಅಳವಡಿಕೆಯತ್ತ ಹೆಚ್ಚಿನ ಗಮನ ನೀಡುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ಮತ್ತು ಬೆಳೆಹಾನಿ ಕುರಿತ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ನಿರ್ವಹಣೆಯ ಕುರಿತಂತೆ ಜಿಲ್ಲಾಡಳಿತ ಇದುವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ಗಡಿ ಪ್ರದೇಶದಿಂದ ಬರುವವರ ತಪಾಸಣೆಗೆ ಕೈಗೊಂಡಂತಹ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಅಲ್ಲದೆ, ಮೂರನೇ ಅಲೆ ಪ್ರಬಲವಾದರೆ ಅದರ ಸುಲಲಿತ ನಿರ್ವಹಣೆಗೆ ಮುಂಜಾಗ್ರತವಾಗಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ತಿಳಿಸಲಾಗಿದೆ ಎಂದರು.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಾರಿಯ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಜ್ಜಾಗಬೇಕು. ಅಲ್ಲದೆ, ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಂಭವವಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿರುವ ಹಳೇ ಡಯಾಲಿಸಿಸ್ ವಾರ್ಡ್‍ನ್ನು ಬದಲಾಯಿಸಿ 10 ವೆಂಟಿಲೇಟರ್‍ಗಳುಳ್ಳ ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ನಿಗಾ ಘಟಕ ನಿರ್ಮಾಣದ ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಹಾಗೂ 14 ಹಾಸಿಗೆಯ ಎಚ್.ಡಿ.ಯು ಸಾಮಾನ್ಯ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.

ವಿಜಯಪುರ ಜಿಲ್ಲೆಯಲ್ಲಿ 15 ರಿಂದ 18 ವಯಸ್ಸಿನ ಮಕ್ಕಳ ಲಸಿಕೀಕರಣದದಲ್ಲಿ ಶೇ.50 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಇದನ್ನು ನೂರರಷ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಆಯಾ ಶಾಲಾ ಶಿಕ್ಷಕರಿಗೆ ಜವಾಬ್ದಾರಿಯನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಜೊಲ್ಲೆ ಹೇಳಿದರು.

ವಿಜಯಪುರ ಎರಡು ತಿಂಗಳ ಹಿಂದೆಯೇ ಮೊದಲ ಡೋಸ್ ಲಸಿಕಾಕರಣ ಕಾರ್ಯಕ್ರಮದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ ಮೂರನೇ ಜಿಲ್ಲೆಯಾಗಿದೆ. ಅಲ್ಲದೆ, ಎರಡನೇ ಡೋಸ್ ನೀಡುವಲ್ಲಿ ಶೇ.80 ರಷ್ಟು ಪ್ರಗತಿ ಸಾಧಿಸಲಾಗಿದೆ. ಈ ರೀತಿ ಲಸಿಕಾಕರಣದಲ್ಲಿ ರಾಜ್ಯದಲ್ಲಿ ಉತ್ತಮ ಸ್ಥಾನ ಹೊಂದಿದೆ. ಉತ್ತಮ ಪ್ರಗತಿ ಸಾಧಿಸುವಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ಚೆಕ್‍ ಪೋಸ್ಟ್ ಗಳಲ್ಲಿ ತಪಾಸಣೆಗೆ ಸೂಚನೆ: ಈಗಾಗಲೇ ಚೆಕ್ ಪೋಸ್ಟ್ ಗಳಲ್ಲಿ ಸ್ವಾಬ್ ಕಲೆಕ್ಷನ್ ಸೆಂಟರ್ ಗಳನ್ನು ತೆರೆಯಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ 24/7 ಗಂಟೆಯೂ ತಪಾಸಣೆ ನಡೆಸಲಾಗುತ್ತಿದ್ದು, ಸಿಬ್ಬಂದಿಗಳ ಕೊರತೆ ಸವಿವರವಾಗಿ ಚರ್ಚಿಸಲಾಯಿತು. ಎನ್‍ಜಿಓಗಳ ಮೂಲಕ ಸೇವೆಯನ್ನು ಪಡೆಯಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಕ್ಕಪಕ್ಕದ ರಾಜ್ಯಗಳಿಂದ ಆಗಮಿಸುವವರನ್ನು ತೀವ್ರ ತಪಾಸಣೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಶಿಕಲಾ ಜೊಲ್ಲೆ ಹೇಳಿದರು.

ಸಿದ್ದಾಪುರ ಚೆಕ್‍ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಗಡಿ ಭಾಗವಾಗಿರುವ ಸಿದ್ದಾಪುರ ಚೆಕ್‍ ಪೋಸ್ಟ್  ಭೇಟಿ ನೀಡಿ ಪರಿಶೀಲನೆ ನಡೆಸಿದ ಶಶಿಕಲಾ ಜೊಲ್ಲೆ, ಅಕ್ಕ ಪಕ್ಕದ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರ ತಪಾಸಣೆ ನಡೆಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಬೆಳೆಹಾನಿ: ಇನ್ನೂ ಬೆಳೆಹಾನಿ ಪರಿಹಾರ ಲಭ್ಯವಾಗಿಲ್ಲ ಎಂಬ ಹಲವಾರು ದೂರುಗಳು ಬಂದಿವೆ. ಅರ್ಧಕ್ಕಿಂತ ಹೆಚ್ಚಿನ ಸಂಖ್ಯೆಯ ರೈತರಿಗೆ ಇದುವರೆಗೂ ಪರಿಹಾರ ದೊರೆತಿಲ್ಲ. ಇದರ ಬಗ್ಗೆ ವಿಶೇಷ ಗಮನ ಹರಿಸಿ ಶೀಘ್ರ ಬೆಳೆಹಾನಿ ಪರಿಹಾರ ರೈತರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಸಿಂಧಗಿ ಶಾಸಕ ರಮೇಶ್ ಬೂಸನೂರು, ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ್ ಅಲ್ಲಾಪುರ್, ಜಿಲ್ಲಾಪಂಚಾಯತ್ ಸಿಇಓ ಗೋವಿಂದ ರೆಡ್ಡಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top