Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಕೆದಾಟು ಪಾದಯಾತ್ರೆಗೆ ನಿಷೇಧ ಹೇರಿದ...

ಮೇಕೆದಾಟು ಪಾದಯಾತ್ರೆಗೆ ನಿಷೇಧ ಹೇರಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 Jan 2022 9:36 PM IST
share
ಮೇಕೆದಾಟು ಪಾದಯಾತ್ರೆಗೆ ನಿಷೇಧ ಹೇರಿದ ರಾಜ್ಯ ಸರಕಾರ

ಬೆಂಗಳೂರು, ಜ. 12: ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಿ `ನಮ್ಮ ನೀರು ನಮ್ಮ ಹಕ್ಕು' ಘೋಷಣೆಯೊಂದಿಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ದೃಢ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಗುಂಪು ಸೇರುತ್ತಿದ್ದು, ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಒಡಾಡುತ್ತಿವೆ. ಹೀಗಾಗಿ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರವಿಕುಮಾರ್ ತಮ್ಮ ಆದೇಶದಲ್ಲಿ, ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಪಾದಯಾತ್ರೆ ನಿಲ್ಲಿಸದಿದ್ದರೆ ರಾಮನಗರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮತ್ತು ಸಾರಿಗೆ ಆಯುಕ್ತರು ಸೂಕ್ತ ಮುನ್ನಚ್ಚರಿಕೆ ಕೈಗೊಳ್ಳಬೇಕು. 2005ರ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಿ.ರವಿಕುಮಾರ್, ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ನಿರ್ದೆಶನ ನೀಡಿದ್ದಾರೆ.

`ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರಕಾರ ಅನುಮತಿ ನೀಡಿಲ್ಲ ಎಂದರೆ ಅದನ್ನು ತಡೆಯಲು ನೀವು ಏಕೆ ಕಾಯುತ್ತಿದ್ದೀರಿ' ಎಂದು ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶ್ನಿಸಿತ್ತು. ಆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಬುಧವಾರ ರಾತ್ರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರ ಮೂಲಕ ಮೇಲ್ಕಂಡ ಆದೇಶ ಹೊರಡಿಸಿದ್ದಾರೆ.

ಜ.9ರಿಂದ ಆರಂಭವಾಗಿರುವ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ `ನೀರಿಗಾಗಿ ನಡಿಗೆ' ಪಾದಯಾತ್ರೆ ನಾಲ್ಕು ದಿನ ಪೂರೈಸಿದ್ದು, ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ. ಇದೇ ವೇಳೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಪ್ರಮುಖ ಮುಖಂಡರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ.

`ಏನೇನೂ ಸುದ್ದಿ ಹಬ್ಬಿಸುತ್ತಿದ್ದಾರೆ. ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ ನಾಳೆ ಬೆಳಗ್ಗೆ ಇಲ್ಲಿಂದಲೇ(ರಾಮನಗರ) ಪಾದಯಾತ್ರೆ ಆರಂಭವಾಗಲಿದೆ. ಡಾ.ಅಶ್ವಥ್ ನಾರಾಯಣ ಅವರೊಬ್ಬ ಸಚಿವರು. ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಟಿ ಮಾಡಬಹುದಿತ್ತು. ಆದರೆ, ರಾಮನಗರಕ್ಕೆ ಬಂದು ಸುದ್ದಿಗೋಷ್ಠಿ ಮಾಡಿದ್ದಾರೆ. ಇಲ್ಲಿಗೆ ಬಂದು ಬಿಜೆಪಿ ಕಾರ್ಯಕರ್ತರಿಗೆ ಗದ್ದಲ ಎಬ್ಬಿಸೋಕೆ ಹೇಳಿ ಹೋಗಿದ್ದಾರೆ. ಯಾರು ಏನೇ ಹೇಳಲಿ ನಿಮ್ಮ ಆಶೀರ್ವಾದ ಇರಲಿ. ನಮ್ಮ ನೀರು ನಮ್ಮ ಹಕ್ಕು. ನೀರಿಗಾಗಿ ನಮ್ಮ ಹೋರಾಟ ನಿಲ್ಲದು'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X