ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದ ಸ್ತಬ್ಧಚಿತ್ರ ಆಯ್ಕೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದಿಂದ ಆಯ್ಕೆಯಾಗಿರುವ ಸ್ತಬ್ಧಚಿತ್ರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ.
"ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ'' ಎಂದು ತಿಳಿಸಿದ್ದಾರೆ.
''ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
.
"ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ. ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ": CM @BSBommai.
— CM of Karnataka (@CMofKarnataka) January 15, 2022
Next Story