''ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?'': ಪಾದಯಾತ್ರೆ ಬಗ್ಗೆ ಬಿಜೆಪಿ ವ್ಯಂಗ್ಯ
ಬೆಂಗಳೂರು: ''ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ? ಅಂದ ಹಾಗೆ ನಿಮ್ಮ ಜೊತೆಯಲ್ಲಿ #ಕೋವಿಡ್ಜಾತ್ರೆಯಲ್ಲಿ ಹೆಜ್ಜೆ ಹಾಕಿದ ಹಲವು ನಾಯಕರಿಗೆ ಈಗ ಕೋವಿಡ್ ದೃಢಪಟ್ಟಿದೆ. ಅಂದರೆ ಕೋವಿಡ್ ನಿಮ್ಮ ಅಕ್ಕಪಕ್ಕದಲ್ಲಿತ್ತು, ಅದಕ್ಕಾಗಿ ನಿಮ್ಮ ಬಗ್ಗೆ ನಮಗೆ ಕಾಳಜಿ!'' ಎಂದು ಟ್ವೀಟ್ ಮಾಡಿರುವ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ವ್ಯಂಗ್ಯವಾಡಿದೆ.
''ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಅತ್ಯಂತ ಅಗತ್ಯವಾಗಿ ಕೋವಿಡ್ ಪರೀಕ್ಷಾ ವರದಿ ಬಿಡುಗಡೆಗೊಳಿಸಬೇಕು. ಇವರು ಪಾದಯಾತ್ರೆ ನಡೆಸಿದ ಭಾಗದಲ್ಲಿ ಈಗ ಕೋವಿಡ್ ಸೋಂಕು ಹೆಚ್ಚುತ್ತಿದೆ. ಈ ಬಾರಿ ಕೋವಿಡ್ ಸೂಪರ್ ಸ್ಪ್ರೆಡರ್ ರೀತಿ ಕೆಲಸ ಮಾಡಿದ್ದೀರಿ. ಸಾರ್ವಜನಿಕ ಹಿತದೃಷ್ಟಿಯಿಂದ ನಿಮ್ಮ ಕೋವಿಡ್ ವರದಿ ಬಹಿರಂಗಗೊಳಿಸುವಿರಾ?'' ಎಂದು ಒತ್ತಾಯಿಸಿದೆ.
ಯಾರಿಗೆ ಆರೋಗ್ಯ ಸರಿ ಇಲ್ಲವೋ, ಅವರು ಮಾತ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ಕೊಟ್ಟರೆ ಹೇಗೆ ಡಿಕೆಶಿ ಅವರೇ? ಹಳೇ ಮೈಸೂರು ಭಾಗದಲ್ಲಿ ಕೋವಿಡ್ ಹಂಚಿಕೆಯ ಅನಧಿಕೃತ ಫ್ರಾಂಚೈಸಿದಾರರು ನೀವು. ಸಾಂಕ್ರಾಮಿಕ ಕಾಯಿದೆ ಉಲ್ಲಂಘನೆಯ ನೇತಾರರಲ್ಲವೇ ನೀವು? ಎಂದು ಬಿಜೆಪಿ ಹೇಳಿದೆ.
ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಅತ್ಯಂತ ಅಗತ್ಯವಾಗಿ ಕೋವಿಡ್ ಪರೀಕ್ಷಾ ವರದಿ ಬಿಡುಗಡೆಗೊಳಿಸಬೇಕು.
— BJP Karnataka (@BJP4Karnataka) January 17, 2022
ಇವರು ಪಾದಯಾತ್ರೆ ನಡೆಸಿದ ಭಾಗದಲ್ಲಿ ಈಗ ಕೋವಿಡ್ ಸೋಂಕು ಹೆಚ್ಚುತ್ತಿದೆ.
ಈ ಬಾರಿ ಕೋವಿಡ್ ಸೂಪರ್ ಸ್ಪ್ರೆಡರ್ ರೀತಿ ಕೆಲಸ ಮಾಡಿದ್ದೀರಿ. ಸಾರ್ವಜನಿಕ ಹಿತದೃಷ್ಟಿಯಿಂದ ನಿಮ್ಮ ಕೋವಿಡ್ ವರದಿ ಬಹಿರಂಗಗೊಳಿಸುವಿರಾ?#ಉತ್ತರಿಸಿಡಿಕೆಶಿ pic.twitter.com/nlefvxAKB3