ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ | Vartha Bharati- ವಾರ್ತಾ ಭಾರತಿ

--

ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ

Photo: Twitter/@BSBommai

ಬೆಂಗಳೂರು, ಜ.18: ರಾಜ್ಯದಲ್ಲಿ ಕೋವಿಡ್-19 ಲಸಿಕಾ ಕಾರ್ಯಕ್ರಮದ ಕುರಿತು 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
‘ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎ.ಎನ್.ಎಂಗಳು ಮನೆ ಮನೆ ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಎಸ್.ಒ.ಪಿ ರೂಪಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಮೊದಲನೇ ಹಾಗೂ 2ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್‍ಗಳನ್ನು ತಲುಪಿಸಬೇಕು. ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆಯನ್ನು ನೀಡಬೇಕು. ಜಿಲ್ಲಾಧಿಕಾರಿಗಳು, ಡಿ.ಎಚ್.ಒಗಳು ತಾಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. ಶೇ.94ರಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಹೇಳಿದರು.

ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರಕಾರಿ ಒ.ಪಿ.ಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಲು ಸೂಚಿಸಿದ ಅವರು, ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ  ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್.ಒ.ಪಿ ರೂಪಿಸಲು ಸೂಚಿಸಿದರು.

ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಕೋ-ಮಾರ್ಬಿಡಿಟಿ ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್‍ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು. ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡುವಂತೆ ಅವರು ಸೂಚಿಸಿದರು.

ವರ್ಚುಯಲ್ ಆಗಿ ನಡೆದ ಈ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ಮೂರನೇ ಅಲೆ ನಿಭಾಯಿಸಬಹುದು.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top