ಖಾಸಗಿ ಶಾಲೆಗಳ ಮಾನ್ಯತಾ ಪ್ರಮಾಣಪತ್ರ ವಿತರಿಸಲು ಸೂಚನೆ
ಬೆಂಗಳೂರು, ಜ.18: ಖಾಸಗಿ ಶಾಲೆಗಳಿಗೆ ಮಾನ್ಯತೆ ನೀಡುವಲ್ಲಿ ವಿಳಂಬವಾಗುತ್ತಿದೆ. ಇದರಿಂದ ಶಾಲೆಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಖಾಸಗಿ ಶಾಲೆಗಳಿಗೆ ಮಾನ್ಯತಾ ಪ್ರಮಾಣ ಪತ್ರವನ್ನು ಕೂಡಲೇ ವಿತರಿಸುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಇಲಾಖೆಯ ಉಪ ನಿರ್ದೇಶಕರಿಗೆ ಆದೇಶಿಸಿದ್ದಾರೆ.
2019-20, 2020-21 ನೇ ಸಾಲಿನ ಖಾಸಗಿ ಶಾಲೆಗಳ ಮಾನ್ಯತಾ ನವೀಕರಣ ಹಾಗೂ 2021-22ನೇ ಸಾಲಿನಲ್ಲಿ ನೂತನ ಖಾಸಗಿ ಶಾಲೆಗಳಿಗೆ ಮಾನ್ಯತಾ ಪ್ರಮಾಣ ಪತ್ರವನ್ನು ನೀಡಬೇಕು. ಹಾಗಾಗಿ ಶಾಲೆಗಳಿಗೆ ಭೇಟಿ ನೀಡಿ, ಮುಂದಿನ ಐದು ವರ್ಷಗಳಿಗೆ ಮಾನ್ಯತೆ ನೀಡಲು ಕ್ರಮ ವಹಿಸುವಂತೆ ಅವರು ಪ್ರಕಟನೆಯಲ್ಲಿ ಸೂಚಿಸಿದ್ದಾರೆ.
ಶಾಲೆಗಳಿಗೆ ಮಾನ್ಯತೆ ನೀಡುವುದನ್ನು ಕಡೆಗಣಿಸಿ, ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಅಥವಾ ಆರ್ಟಿಇ ಶುಲ್ಕು ಮರು ಪಾವತಿ ಮಾಡಲು ವಿಳಂಬವಾದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
Next Story