ಶಿವಮೊಗ್ಗ: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬೆಂಕಿ ಅವಘಡ
ಶಿವಮೊಗ್ಗ, ಜ.28: ನಗರದ ಗಾರ್ಡನ್ ಏರಿಯಾದ ಮೂರನೇ ಕ್ರಾಸ್ನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಕಿಟಕಿಗಳಿಂದ ದಟ್ಟ ಹೊಗೆ ಹೊರಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ದಾಖಲೆಗಳಿದ್ದ ಕೊಠಡಿಗೆ ಬೆಂಕಿ ತಗುಲಿದೆ ಎನ್ನಲಾಗಿದ್ದು, ದಾಖಲೆಗಳ ಸಂಗ್ರಹಕ್ಕೆ ಹಾನಿಯುಂಟಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಟ್ರಾಂಗ್ ರೂಮ್ ಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಬೆಂಕಿಗೆ ಕಾರಣ ತಿಳಿದುಬಂದಿಲ್ಲ.