ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕನಾಗಿ ಯು.ಟಿ.ಖಾದರ್ ನೇಮಕ
ಯು.ಟಿ.ಖಾದರ್
ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ.
ಮಂಗಳೂರು ಕ್ಷೇತ್ರದಿಂದ 4 ಬಾರಿ ಶಾಸಕರಾಗಿ ಆಯ್ಕೆಯಾದ ಯು.ಟಿ ಖಾದರ್, ಆರೋಗ್ಯ, ವಸತಿ, ಆಹಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Next Story