ಅತಿಥಿ ಉಪನ್ಯಾಸಕರ ನೇಮಕ: ಹಿರಿತನ, ಅರ್ಹತೆಗೆ ಆದ್ಯತೆ; ಪಿ.ಪ್ರದೀಪ್ ಸ್ಪಷ್ಟನೆ | Vartha Bharati- ವಾರ್ತಾ ಭಾರತಿ

--

ಅತಿಥಿ ಉಪನ್ಯಾಸಕರ ನೇಮಕ: ಹಿರಿತನ, ಅರ್ಹತೆಗೆ ಆದ್ಯತೆ; ಪಿ.ಪ್ರದೀಪ್ ಸ್ಪಷ್ಟನೆ

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.3: 2021-22ನೆ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಿಂದ 9,800ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನುವ ವರದಿ ವಸ್ತುಸ್ಥಿತಿಗೆ ದೂರವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಗೆ ಗುರುವಾರ ಸ್ಪಷ್ಟನೆ ನೀಡಿರುವ ಅವರು, `ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ ಎಂದರು.

ನೇಮಕ ಪ್ರಕ್ರಿಯೆಯಲ್ಲಿ ಸೇವಾಹಿರಿತನ, ವಯಸ್ಸು ಮತ್ತು ಯುಜಿಸಿ ನಿಗದಿತ ಅರ್ಹತೆ ಮೂರನ್ನೂ ಸಮಾನವಾಗಿ ಪರಿಗಣಿಸಲಾಗಿದೆ. ನೇಮಕಾತಿಯಲ್ಲಿ ಇವರಿಗೇ ಆದ್ಯತೆ ಕೊಡಲಾಗುತ್ತಿದೆ. ಜತೆಗೆ ನಿಯಮಾನುಸಾರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ 14 ಸಾವಿರ ಮಂದಿಯ ಪೈಕಿ ಕೇವಲ 3,400 ಮಂದಿ ಮಾತ್ರ ಆಯ್ಕೆ ಆಗುತ್ತಿಲ್ಲ. ಆದರೆ, ಇವರಲ್ಲಿ ಕೂಡ ಹೆಚ್ಚಿನವರು ಅತ್ಯಂತ ಕಡಿಮೆ ಅನುಭವ ಹೊಂದಿದವರಾಗಿದ್ದಾರೆ ಎಂದು ಅವರು ವಿವರಿಸಿದರು.

ಇದುವರೆಗೂ ಅತಿಥಿ ಉಪನ್ಯಾಸಕರು ಗರಿಷ್ಠ ಅವಧಿ ಬೋಧನೆ ಮಾಡಿದರೂ ಅವರ ಮಾಸಿಕ ವೇತನ 13 ಸಾವಿರ ರೂ. ದಾಟುತ್ತಿರಲಿಲ್ಲ. ಆದರೆ, ಈಗ ನೇಮಕ ಆಗುತ್ತಿರುವವರಿಗೆ ಗರಿಷ್ಠ 32 ಸಾವಿರ ರೂ.ಗಳವರೆಗೆ ಸಿಗುವ ಹಾಗೆ ಮಾಡಲಾಗಿದೆ ಎಂದು ಪ್ರದೀಪ್ ನುಡಿದರು.
ಅತಿಥಿ ಉಪನ್ಯಾಸಕರ ಹುದ್ದೆಗೆ 60 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಇದುವರೆಗೆ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿದರವರನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top