ವಿಧಾನಪರಿಷತ್ ಸಭಾ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ
ಬೆಂಗಳೂರು, ಫೆ.11: ವಿಧಾನಪರಿಷತ್ತಿನ ಸಭಾ ನಾಯಕರನ್ನಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯನ್ನು ನಾಮನಿರ್ದೇಶನ ಮಾಡಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಈ ಹಿಂದೆಯೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭಾನಾಯಕನಾಗಿ ನೇಮಕಗೊಂಡಿದ್ದರು
Next Story