ಬೆಳಗಾವಿ: ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲು ತೂರಾಟ
ಬೆಳಗಾವಿ, ಫೆ.14: ಇಲ್ಲಿನ ಚವಾಟ ಗಲ್ಲಿಯಲ್ಲಿರುವ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆಯವರ ಕಚೇರಿ ಮೇಲೆ ಸೋಮವಾರ ನಸುಕಿನಲ್ಲಿ ಕಲ್ಲುತೂರಾಟ ನಡೆದಿದೆ.
ಕಲ್ಲೆಸೆತದಿಂದ ಕಚೇರಿಯ ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಇದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.
ಪಾನಮತ್ತನಾಗಿದ್ದ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.
ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story