Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ...

ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಸದನದಲ್ಲಿ ನಿರ್ಣಯ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 March 2022 6:16 PM IST
share
ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಸದನದಲ್ಲಿ ನಿರ್ಣಯ: ಕುಮಾರಸ್ವಾಮಿ

ಬೆಂಗಳೂರು, ಮಾ.3: 2023ರಲ್ಲಿ ಜೆಡಿಎಸ್ ಸರಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನು ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು ಎಂದು ಹೇಳಿದ್ದಾರೆ.

ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೇಂದ್ರದ ಒಬ್ಬ ಸಚಿವರು, ನೀಟ್ ಪರೀಕ್ಷೆ ಪಾಸ್ ಮಾಡಲಾಗದ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಆ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದರೆ, ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ. ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಆತ್ಮರೋದನೆ ಕೇಳುತ್ತಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಕಿಡಿಗಾರಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X