ಅನಾರೋಗ್ಯ ಹಿನ್ನೆಲೆ: ಗೌರಿ ಲಂಕೇಶ್ ಹತ್ಯೆ ಆರೋಪಿ ನವೀನ್ಕುಮಾರ್ ಗೆ ಜಾಮೀನು
ಗೌರಿ ಲಂಕೇಶ್
ಬೆಂಗಳೂರು, ಮಾ.4: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17ನೆ ಆರೋಪಿಯಾಗಿರುವ ಕೆ.ಟಿ.ನವೀನ್ಕುಮಾರ್ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಕೆ.ಟಿ.ನವೀನ್ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಹಲವು ಷರತ್ತುಗಳನ್ನು ವಿಧಿಸಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಿದೆ.
ಆರೋಪಿ ನವೀನ್ಕುಮಾರ್ ಮೂತ್ರಪಿಂಡ ಸಮಸ್ಯೆ ಸೇರಿ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಪೀಠವು ಜಾಮೀನು ಮಂಜೂರು ಮಾಡಿದೆ.
ಕಾರಾಗೃಹದಲ್ಲಿರುವ ನವೀನ್ಕುಮಾರ್ ಗೆ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ, ಸೂಕ್ತ ಭದ್ರತೆ ಒದಗಿಸುವಂತೆ ನ್ಯಾಯಪೀಠವು ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.
Next Story