ಮೀನುಗಾರಿಕೆ ವಿಜ್ಞಾನಗಳ ವಿವಿ ಸ್ಥಳಾಂತರವಿಲ್ಲ: ಸಚಿವ ಪ್ರಭು ಬಿ.ಚವ್ಹಾಣ್
ಬೆಂಗಳೂರು, ಮಾ.9: ಬೀದರ್ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಹಸ್ತಾಂತರ, ಸ್ಥಳಾಂತರ ಮಾಡುವುದಿಲ್ಲ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಹೇಳಿದರು.
ಬುಧವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಅರವಿಂದಕುಮಾರ್ ಅರಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಬೀದರ್ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Next Story