ಪರಿಷತ್ ಚುನಾವಣೆ: ಮೂವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

ಬೆಂಗಳೂರು, ಮಾ.11: ರಾಜ್ಯ ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೂವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಶುಕ್ರವಾರ ಪ್ರಕಟಿಸಿದೆ.
ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ್ ಶಹಾಪುರ್, ವಾಯುವ್ಯ ಪದವೀಧರ ಕ್ಷೇತ್ರಕ್ಕೆ ಹನುಮಂತಪ್ಪ ರುದ್ರಪ್ಪ ನಿರಾಣಿ ಹಾಗೂ ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ.ರವಿಶಂಕರ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿರುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next Story





