ಪಾವಗಡ: ಖಾಸಗಿ ಬಸ್ ಪಲ್ಟಿ; 5 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ
ತುಮಕೂರು: ಖಾಸಗಿ ಬಸ್ ಒಂದು ಪಲ್ಟಿ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 4 ಮಂದಿ ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಓರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಐವರು ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿಕತ್ಸೆಗಾಗಿ ತುಮಕೂರು, ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ.
- ಎಸ್ಪಿ ರಾಹುಲ್ ಕುಮಾರ್
Next Story