Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಸರಿ ಧ್ವಜವೇ ಮುಂದೆ ರಾಷ್ಟ್ರಧ್ವಜ...

ಕೇಸರಿ ಧ್ವಜವೇ ಮುಂದೆ ರಾಷ್ಟ್ರಧ್ವಜ ಆಗಬಹುದು ಎಂದಿರುವ ಪ್ರಭಾಕರ ಭಟ್ ಹಿನ್ನೆಲೆ ನನಗೆ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 March 2022 6:09 PM IST
share
ಕೇಸರಿ ಧ್ವಜವೇ ಮುಂದೆ ರಾಷ್ಟ್ರಧ್ವಜ ಆಗಬಹುದು ಎಂದಿರುವ ಪ್ರಭಾಕರ ಭಟ್ ಹಿನ್ನೆಲೆ ನನಗೆ ಗೊತ್ತಿಲ್ಲ: ಡಿ.ಕೆ. ಶಿವಕುಮಾರ್

ಮೈಸೂರು: ಮುಂದೊಂದು ದಿನ ಕೇಸರಿ ಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದಿರುವ ಪ್ರಭಾಕರ ಭಟ್ ಬಿಜೆಪಿಯವರೋ, ಆರೆಸ್ಸೆಸ್ ನವರೋ? ಅವರ ಹಿನ್ನಲೆ ನನಗೆ ಗೊತ್ತಿಲ್ಲ. ಅವರ ಬಗ್ಗೆ ಮಾತನಾಡುವುದರಲ್ಲಿ ಅರ್ಥ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು,  'ಒಬ್ಬ ಮಂತ್ರಿ ರಾಷ್ಟ್ರ ಧ್ವಜ ವಿಚಾರವಾಗಿ ಮಾತನಾಡಿದಾಗ ನಾವು ಆರು ದಿನ ಅಹೋರಾತ್ರಿ ಧರಣಿ ಮಾಡಿದಾಗ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಏನು ಹೇಳಬೇಕಿತ್ತೋ ಹೇಳಿದ್ದಾರೆ. ನಮ್ಮ ಹೋರಾಟದ ಹಿಂದಿನ ಅರ್ಥ ಹಾಗೂ ನಡ್ಡಾ ಅವರ ಮಾತು ಒಂದೇ ಆಗಿದೆ. ಹೀಗಾಗಿ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ.  ಇವರೆಲ್ಲ ರಾಷ್ಟ್ರವಿರೋಧಿ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ' ಎಂದರು. 

''ಬಿಜೆಪಿ ಭಾವನಾತ್ಮಕ ವಿಚಾರ ಇಟ್ಟುಕೊಂಡೇ ಮುನ್ನಡೆಯುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, 'ಜನ ದಡ್ಡರಲ್ಲ. ಬಿಜೆಪಿಯವರು ಸಮಾಜ ಒಡೆಯಲು ಏನು ಬೇಕೋ ಅದನ್ನು ಮಾಡುತ್ತಿದ್ದಾರೆ. ನಿನ್ನೆ ಇವರು ಭಗವದ್ಗೀತೆ ವಿಚಾರವಾಗಿ ಮಾತನಾಡಿದ್ದಾರೆ. ನಮ್ಮ ನಾಯಕ ರಾಜೀವ್ ಗಾಂಧಿ ಅವರು ಪ್ರಧಾನ ಮಂತ್ರಿ ಆಗಿದ್ದ ಸಂದರ್ಭದಲ್ಲಿ ದೂರದರ್ಶನದಲ್ಲಿ ಮಹಾಭಾರತ, ರಾಮಾಯಣವನ್ನು ಜನರಿಗೆ ತೋರಿಸಿ, ಭಾರತದ ಹಿಂದೂ ಧರ್ಮದ ಮಹಾನ್ ಗ್ರಂಥಗಳ ಬಗ್ಗೆ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಸಿಗುವಂತೆ ಮಾಡಿದ್ದಾರೆ. ಈಗಾಗಲೇ ಭಗವದ್ಗೀತೆಯ ಕೆಲವು ಅಂಶಗಳು ಪುಸ್ತಕಗಳಲ್ಲಿ ಇವೆ'' ಎಂದು ಉತ್ತರಿಸಿದರು.

'ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಗೊಂದಲ ಇವೆಯೇ ಎಂಬ ಪ್ರಶ್ನೆಗೆ, 'ಯಾವುದೇ ಗೊಂದಲ ಇಲ್ಲ.  ನಾವೆಲ್ಲ ಹಿಂದೂಗಳು. ಕರ್ನಾಟಕ ಹಾಗೂ ಶಾಲಾ ಮಕ್ಕಳ ವಿಚಾರ ಇರಲಿ, ಇಡೀ ದೇಶಕ್ಕೆ ರಾಜೀವ್ ಗಾಂಧಿ ಅವರು ಚಿಕ್ಕ ಮಕ್ಕಳಿಂದ ಹಿರಿಯರವರೆಗೂ ಎಲ್ಲರಿಗೂ ಮಹಾಭಾರತ ಹಾಗೂ ರಾಮಾಯಣವನ್ನು ತೋರಿಸಿ ಈ ಪವಿತ್ರ ಗ್ರಂಥಗಳ ಸಂದೇಶದ ಬಗ್ಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ'' ಎಂದರು.

'ರಾಜ್ಯದಲ್ಲಿ ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಸಾಕಷ್ಟು ಗಂಭೀರ ವಿಚಾರಗಳಿವೆ. ಕಬ್ಬಿಣ ಬೆಲೆ 90 ಸಾವಿರದಿಂದ 1 ಲಕ್ಷದ ವರೆಗೆ ಮುಟ್ಟಿದೆ. ಸೀಮೆಂಟ್ ಚೀಲಕ್ಕೆ 450 ರೂ. ಆಗಿದೆ. ಇವುಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಸಣ್ಣ ಮನೆ ಕಟ್ಟುವವರ ಕಥೆ ಏನಾಗಬೇಕು? ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ನೆಮ್ಮದಿ ಸೂಚ್ಯಂಕದಲ್ಲಿ ಭಾರತ 160 ನೇ ಸ್ಥಾನ ಪಡೆದಿದೆ. ಅಂದರೆ ನಮ್ಮ ದೇಶದ ಜನ ನೆಮ್ಮದಿಯಾಗಿಲ್ಲ ಎಂದು ಸೂಚಿಸುತ್ತದೆ' ಎಂದು ತಿಳಿಸಿದರು.

ರೈತರ ರಾಗಿ ಖರೀದಿಸಿ ಶೋಭಕ್ಕ: 'ಶೋಭ ಕರಂದ್ಲಾಜೆ ಅವರು ಕೃಷಿ ಮಂತ್ರಿಗಳಾಗಿದ್ದಾರೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ಬದಲು ರಾಗಿ, ಭತ್ತ, ಜೋಳಕ್ಕೆ ಬೆಂಬಲ ಬೆಲೆ ಕೊಡಿಸಕ್ಕ. ಆಮೇಲೆ ನಮ್ಮ ಬಗ್ಗೆ ಮಾತನಾಡುವಿರಂತೆ. ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿ ಕೂತಿದ್ದೀರಾ. ರಾಗಿ ಖರೀದಿಗೆ ಹಾಕಿರುವ ನಿರ್ಬಂಧ ತೆಗೆದು ಹಾಕಿ ರೈತರಿಂದ ರಾಗಿ ಖರೀದಿ ಮಾಡಿ. ಅದು ನಿಮ್ಮ ಕರ್ತವ್ಯ.'

ಸದಸ್ಯತ್ವ ನೋಂದಣಿ:

'ಮಾರ್ಚ್ 31ರವರೆಗೆ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆಯುತ್ತಿದೆ. ಈ ವಿಚಾರವಾಗಿ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಇಂದು ಖಾಸಗಿ ಕಾರ್ಯಕ್ರಮಕ್ಕೆ ಇಲ್ಲಿಗೆ ಆಗಮಿಸಿದ್ದು, ಆದರೂ ಇಲ್ಲಿಗೆ ಬಂದು ಚರ್ಚೆ ನಡೆಸುತ್ತಿದ್ದೇನೆ. ಶಾಸಕರಾಗುವ ಆಕಾಂಕ್ಷೆ ಇರುವವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಿ. ನೀವು ಹೆಚ್ಚಿನ ಸದಸ್ಯತ್ವ ಮಾಡದಿದ್ದರೆ ನೀವು ನಾಯಕರಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಸದಸ್ಯರೇ ಪಕ್ಷದ ಆಸ್ತಿ. ಹೀಗಾಗಿ ಈ ವಿಚಾರದಲ್ಲಿ ನಾವು ನಮ್ಮ ನಾಯಕರಿಗೆ ಜವಾಬ್ದಾರಿ ವಹಿಸಿದ್ದೇವೆ.'

share
ವಾರ್ತಾಭಾರತಿ
ವಾರ್ತಾಭಾರತಿ
Next Story
X