ದಾವಣಗೆರೆ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ದಾವಣಗೆರೆ : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಮತ್ತು ಔಷಧಿಗಳ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು, ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ರಾಜ್ಯಾಧ್ಯಕ್ಷ ಮುಹಮದ್ ನಲಪಾಡ್ ಹ್ಯಾರಿಸ್ ಮತ್ತು ಜಿಲ್ಲಾಧ್ಯಕ್ಷ ನಿಖಿಲ್ ಆರ್ ಕೊಂಡಜ್ಜಿ, ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಭಗತ್ ಸಿಂಗ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಈ ವೇಳೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ನಂತರ ಅರುಣ ವೃತ್ತದವರೆಗೂ ಘೋಷಣೆ ಕೂಗುತ್ತಾ ಮೆರವಣೆಗೆ ನಡೆಸಿದರು.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಹರಿಹರ ಶಾಸಕ ಎಸ್.ರಾಮಪ್ಪ, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ವಿಪಕ್ಷ ನಾಯಕ ಗಡಿಗುಡಾಳ ಮಂಜುನಾಥ್, ಪಾಲಿಕೆ ಸದಸ್ಯ ಎ.ನಾಗರಾಜ್, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಕೆ.ಜಿ. ಶಿವಕುಮಾರ್, ಎಲ್ ಎಂ ಸಾಗರ್, ರಾಕೇಶ್, ಆರ್ ಬಿ ಝಡ್ ಬಾಷಾ, ಹರೀಶ್ ಬಸಾಪುರ್, ಮೊಹಿದ್ದಿನ್, ಸೈಯದ್ ಖಾಲಿದ್ ಆಹಮದ್, ರಂಜಿತ್ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.