ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಸಾಸಲು ಸತೀಶ್ ನೇಮಕ
ಡಾ.ಸಾಸಲು ಸತೀಶ್
ಬೆಂಗಳೂರು, ಎ. 10: ತುಮಕೂರು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾಗೂ ಯುವ ಮುಖಂಡ ಡಾ. ಸಾಸಲು ಸತೀಶ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸೂಚನೆ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮೇಲ್ಕಂಡ ಆದೇಶ ಹೊರಡಿಸಿದ್ದು, ಯಾದವ (ಗೊಲ್ಲ) ಸಮುದಾಯದ ನಾಯಕರೂ ಆಗಿರುವ ಡಾ.ಸಾಸಲು ಸತೀಶ್ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವುದಕ್ಕೆ ಯಾದವ ಸಮುದಾಯದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
Next Story