ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು, ಎ.21: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ (Rain) ಮುಂದಿನ ಮೂರು ದಿನ ಮುಂದುವರಿಯಲಿದೆ.
ಗುರುವಾರವೂ ವಿವಿಧೆಡೆ ಮಳೆ ಸುರಿದಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಎ.22ರಿಂದ ಎ.24ರವೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎ.14ರಿಂದ ಎ.21ರವರೆಗೆ ರಾಜ್ಯದಲ್ಲಿ ವಾಡಿಕೆಯ 8 ಮಿಮೀ ಮಳೆ ಬದಲಾಗಿ 28 ಮಿಮೀ ಸುರಿದಿದ್ದು, ಶೇ.243 ಹೆಚ್ಚು ಮಳೆಯಾಗಿದೆ. ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ವರ್ಷಧಾರೆಯಾಗಿದೆ.
Next Story