ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಆರೋಪಿಗಳನ್ನು ತಕ್ಷಣ ಬಂಧಿಸ ಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒತ್ತಾಯಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಮುಂದುವರಿಯಲು ಅನರ್ಹ, ತಕ್ಷಣವೇ ಅವರು ರಾಜೀನಾಮೆ ನೀಡಬೇಕು. ಸಂತ್ರಸ್ತರಿಗೆ ಸರಕಾರ ಕೂಡಲೇ ಪರಿಹಾರ ಘೋಷಿಸಬೇಕು ಎಂದು ಹೇಳಿದ್ದಾರೆ.
ಗುರುವಾರ ತುಮಕೂರಿನ ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯ ತೋಟದ ಮಧ್ಯೆ ಇರುವ ಹೊಂಡದಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದರೆ, ಇನ್ನೋರ್ವನ ಮೃತದೇಹ ದಾರಿಯಲ್ಲಿ ಪತ್ತೆಯಾಗಿತ್ತು.
The death of Dalits in Tumkur reflects the apathy of BJP towards Dalits, and failure to maintain Law & Order under @BJP4Karnataka govt.
— Siddaramaiah (@siddaramaiah) April 23, 2022
Home Minister @JnanendraAraga is unfit to continue & should resign immediately.
Govt should immediately announce compensation to the victims.