ರಾಜ್ಯಾದ್ಯಂತ 154 ಕೊರೋನ ಪ್ರಕರಣ ದೃಢ, ಸಾವು ಶೂನ್ಯ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು, ಎ.28: ರಾಜ್ಯದಲ್ಲಿ ಗುರುವಾರ 154 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 116 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,47,363ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,057ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,751ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 154 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 114, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ಧಾರವಾಡ 1, ಕೋಲಾರ 1, ಮೈಸೂರು 2, ತುಮಕೂರು 1, ವಿಜಯಪುರ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆಯಾಗಿವೆ.
Next Story