Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ...

ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರು ಮಹಾದೇವ ಪತ್ರ

ವಾರ್ತಾಭಾರತಿವಾರ್ತಾಭಾರತಿ24 May 2022 4:08 PM IST
share
ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರು ಮಹಾದೇವ ಪತ್ರ

ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ  ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು,  ಹಿರಿಯ ಸಾಹಿತಿ ದೇವನೂರು ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

'ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನನೂ ತಿಳಿದಿಲ್ಲ ಎಂತಲೇ ಅರ್ಥ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು 'ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟ ಪಡಿಸುವುದಕ್ಕಾಗಿ ಈ ಪುಕಟನೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ' ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ದೇವನೂರು ಮಹಾದೇವ ಅವರ ಪತ್ರದ ಸಾರಾಂಶ ಹೀಗಿದೆ... 

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟ ಪಡಿಸುವುದಕ್ಕಾಗಿ ಈ ಪುಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ,

(1) ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನನೂ ತಿಳಿದಿಲ್ಲ ಎಂತಲೇ ಅರ್ಥ.

(2) ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪುಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್ ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ಪತ್ರದಲ್ಲಿ ದೇವನೂರು ಅವರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X