ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ತನ್ನ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಸಾಹಿತಿ ಡಾ. ಜಿ.ರಾಮಕೃಷ್ಣ
ಡಾ. ಜಿ.ರಾಮಕೃಷ್ಣ
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಇನ್ನೋರ್ವ ಸಾಹಿತಿ ಡಾ. ಜಿ.ರಾಮಕೃಷ್ಣ , ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ.
'ನನ್ನ ಯಾವುದಾದರು ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ' ನಮ್ಮ ರಾಜ್ಯದ ಶಾಲೆಗಳ ಪಠ್ಯಪುಸ್ತಕಗಳ ತಥಾಕಥಿತ ಪರಿಷ್ಕರಣೆಯು ತೀರಾ ಅಪಾಮಾರ್ಗದಲ್ಲಿ ಸಾಗುತ್ತಿರುವುದು ಜಗಜ್ಜಾಹೀರಾಗಿದೆ. ಅದು ಕೇವಲ ಅಬದ್ಧ ಮತ್ತು ಅವೈಚಾರಿಕ ಪ್ರಕ್ರಿಯೆಯಾಗಿ ಉಳಿದಿಲ್ಲ. ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ. ಮಕ್ಕಳಿಗೆ ವಿಷ ಉಣಿಸುವುದು ಬೌದ್ಧಿಕ ಕ್ಷೇತ್ರದಲ್ಲಿ ದುರಂತ.
ಈ ಹಿನ್ನೆಲೆಯಲ್ಲಿ ನನ್ನ ಯಾವುದೇ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ ಹೊರಗಿಡುವುದು ಸೂಕ್ತವೆಂದು ಭಾವಿಸಿ ನನ್ನ ಯಾವುದಾದರು ಬರಹವನ್ನು ಆಯ್ಕೆ ಮಾಡಿಕೊಂಡಿದ್ದರು ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲವೆಂಬುದನ್ನು ಖಚಿತಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರು ಮಹಾದೇವ ಪತ್ರ