ಬೆಳಗಾವಿ ವ್ಯಾಕ್ಸಿನ್ ಡಿಪೊ ಅಭಿವೃದ್ಧಿ ಕಾಮಗಾರಿ ನಡೆಸಲು ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ
ಬೆಂಗಳೂರು, ಮೇ 27: ಬೆಳಗಾವಿಯ ಐತಿಹಾಸಿಕ ಉದ್ಯಾನ ಲಸಿಕಾ ಸಂಗ್ರಹ ಕೇಂದ್ರದ(ವ್ಯಾಕ್ಸಿನ್ ಡಿಪೊ) ವ್ಯಾಪ್ತಿಯಲ್ಲಿ ರಂಗಮಂದಿರ ಸೇರಿ ಇತರೆ ಅಭಿವೃದ್ಧಿ ಕಾಮಗಾರಿ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಸ್ಮಾರ್ಟ್ಸಿಟಿ ಯೋಜನೆ ಅಡಿಯಲ್ಲಿ ವ್ಯಾಕ್ಸಿನ್ ಡಿಪೊದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲು ರಾಜ್ಯ ಸರಕಾರ ರೂಪಿಸಿದ್ದ ಯೋಜನೆ ಪ್ರಶ್ನಿಸಿ ಕಿಶೋರ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಲಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ಈ ಆದೇಶ ನೀಡಿದೆ.
ಲಸಿಕಾ ಸಂಗ್ರಹ ಕೇಂದ್ರದ ವ್ಯಾಪ್ತಿಯಲ್ಲಿ ಇರುವ ಮರಗಳನ್ನು ಕತ್ತರಿಸದೆ ಅಭಿವೃದ್ಧಿ ಕಾಮಗಾರಿ ನಡೆಸಲು ಅನುಮತಿ ನೀಡಿದೆ.
Next Story