ಜೂ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ
ಬೆಂಗಳೂರು, ಮೇ 30: ನೈರುತ್ಯ ಮುಂಗಾರು ಜೂ.1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದ್ದು, ಜೂ.2ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಕೇರಳ ಪ್ರವೇಶಿಸಿದ ನಾಲ್ಕೈದು ದಿನಗಳಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. ಹೀಗಾಗಿ, ಜೂನ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಜೂ.2ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂ.2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story