PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳು
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಬ್ಬರು ಆಕ್ರಮದ ಪ್ರಮುಖ ಆರೋಪಿಯಾಗಿರುವ ಆರ್ ಡಿ ಪಾಟೀಲ್ ಆಪ್ತರಾಗಿದ್ದಾರೆ. ಅಫಜಲಪುರ ತಾಲೂಕಿನ ಮನೂರ್ ಗ್ರಾಮದ ನಿವಾಸಿ ಅಸ್ಲಂ ಹಾಗೂ ಕರಜಗಿ ಗ್ರಾಮದ ನಿವಾಸಿ ಮುನಾಫ್ ಜಮಾದಾರ ಬಂಧಿತರು ಎಂದು ತಿಳಿದುಬಂದಿದೆ. ಇಬ್ಬರು ಅಭ್ಯರ್ಥಿಗಳಿಗೆ ಬ್ಲೂಟೂತ್ ಸರಬರಾಜು ಮಾಡುತ್ತಿದರು ಎಂದು ತಿಳಿದುಬಂದಿದೆ.
ಸದ್ಯ ಇಬ್ಬರನ್ನು ಬಂಧಿಸಿದ ಅಧಿಕಾರಿಗಳು ಆರೋಪಿಗಳನ್ನು ಸಿಐಡಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಪಿಎಸ್ಐ ಸೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
Next Story