ರಾಜ್ಯಸಭೆ ಚುನಾವಣೆಯಲ್ಲಿ ನನ್ನ ಮತ ಜೆಡಿಎಸ್ ಅಭ್ಯರ್ಥಿಗೆ: ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ
ಮೈಸೂರು,ಜೂ,9: ನಾಳೆ ನಡೆಯುವ ರಾಜ್ಯಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾನು ಜೆಡಿಎಸ್ ನಿಂದ ಅಧಿಕೃತವಾಗಿ ಆಯ್ಕೆಯಾಗಿದ್ದೇನೆ. ನನ್ನ ಆತ್ಮಸಾಕ್ಷಿಗನುಗುಣವಾಗಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನನಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಹೆಚ್. ಡಿ. ಕುಮಾರಸ್ವಾಮಿ ಸಹ ಕೇಳಿದ್ದಾರೆ, ನನ್ನ ಬೆಂಬಲಿಗರು ಕ್ಷೇತ್ರದ ಮುಖಂಡರ ಅಭಿಪ್ರಾಯವು ಅದೇ ಆಗಿದೆ. ಈ ಎಲ್ಲಾ ಕಾರಣದಿಂದ ನಾನು ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಜಿ.ಟಿ ದೇವೇಗೌಡರು ತಿಳಿಸಿದ್ದಾರೆ.
Next Story