PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಪೇದೆ ಸಿಐಡಿ ಬಲೆಗೆ
ಬೆಂಗಳೂರು, ಜೂ.12: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ ಇಸ್ಮಾಯಿಲ್ನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇನ್ಸರ್ವೀಸ್ ಕೋಟಾದಲ್ಲಿ ಇಸ್ಮಾಯಿಲ್ ಜಮಾದಾರ್ ಆಯ್ಕೆಯಾಗಿದ್ದು, ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ರಾತ್ರಿ ಇಸ್ಮಾಯಿಲ್ ಜಮಾದಾರ್ನನ್ನು ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆ, ಸಿಐಡಿ ಪೊಲೀಸರಿಂದ ಸೆರೆ ಹಿಡಿಯಲಾಗಿದೆ.
ಇಸ್ಮಾಯಿಲ್ ಜಮಾದಾರ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಿಐಡಿ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story