ಮಂಡ್ಯ | ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ
ಸಾಂದರ್ಭಿಕ ಚತ್ರ
ಮಂಡ್ಯ, ಜೂ.18: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಬೇಸರಗೊಂಡು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದಲ್ಲಿ ನಡೆದಿದೆ.
ಮಂಡ್ಯದ ಸ್ಯಾಂಥೋಂ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದಿದ್ದ ಜಗದೀಶ್ ಅವರ ಪುತ್ರಿ ಎಂ.ಜೆ.ಸ್ಪಂದನಾ(17) ತನ್ನ ಮನೆಯಲ್ಲಿ ನೇಣಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇಂದು(ಶನಿವಾರ) ಫಲಿತಾಂಶ ಪ್ರಕಟವಾಗಿದ್ದ ಮೂರು ವಿಷಯಗಳಲ್ಲಿ ಸ್ಪಂದನಾ ಅನುತೀರ್ಣರಾಗಿದ್ದಳು ಎನ್ನಲಾಗಿದ್ದು, ಇದರಿಂದ ಮನನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story