ಮೂಡಿಗೆರೆ: ಮರಕ್ಕೆ ಢಿಕ್ಕಿ ಹೊಡೆದ ಕಾರು; ತಂದೆ-ಮಗ ಸ್ಥಳದಲ್ಲೇ ಮೃತ್ಯು
ಮೂಡಿಗೆರೆ: ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮೃತರನ್ನು ಬೆಂಗಳೂರಿನ ರಾಜಾಜಿನಗರ ಮೂಲದ ನರಸಿಂಹರಾಜ್ (46) ಹಾಗೂ ಕಿರಣ್ (23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ
ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story