ತುಮಕೂರು: ಕೆಎಸ್ಸಾರ್ಟಿಸಿ ಬಸ್-ಕಾರು ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲಿಯೇ ಮೃತ್ಯು
ತುಮಕೂರು : ಕೆಎಸ್ಸಾರ್ಟಿಸಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ.
ತುಮಕೂರು ಕಡೆಯಿಂದ ಹೋಗುತ್ತಿದ್ದ ಬಸ್ ಮತ್ತು ತಿಪಟೂರು ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಢಿಕ್ಕಿಯಾಗಿ, ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story