ರಾಜ್ಯದಲ್ಲಿಂದು 676 ಕೊರೋನ ಪ್ರಕರಣ ದೃಢ
ಸಾಂದರ್ಭಿಕ ಚಿತ್ರ (PTI)
ಬೆಂಗಳೂರು, ಜೂ.22: ರಾಜ್ಯದಲ್ಲಿ ಬುಧವಾರ 676 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 804 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,62,775ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,071ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4,892ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 676 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 5, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರುನಗರ 626, ಚಿಕ್ಕಮಗಳೂರು 2, ದಕ್ಷಿಣಕನ್ನಡ 4, ಧಾರವಾಡ 2, ಕಲಬುರಗಿ 2, ಮಂಡ್ಯ 2, ಮೈಸೂರು 12, ಶಿವಮೊಗ್ಗ 2, ತುಮಕೂರು 1, ಉಡುಪಿ 5, ಉತ್ತರಕನ್ನಡ ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.
Next Story