ಚಾಮರಾಜನಗರ: ಬೈಕ್ ಗಳ ಮುಖಾಮುಖಿ ಢಿಕ್ಕಿ; ಇಬ್ಬರು ಮೃತ್ಯು
ಚಾಮರಾಜನಗರ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಮದ್ದೂರು ಸಮೀಪದ ಎಳೆಪಿಳ್ಳಾರಿ ಸಮೀಪ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮನು (24) ಚಾಮರಾಜನಗರ ಗಾಳೀಪುರ ನಿವಾಸಿ ರಾಜು (24) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story