ಎಸೆಸೆಲ್ಸಿ ಪೂರಕ ಪರೀಕ್ಷೆ: ಪ್ರಥಮ ಭಾಷಾ ಪರೀಕ್ಷೆಯಲ್ಲಿ ಏಳು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು
ಬೆಂಗಳೂರು, ಜೂ.28: ಎಸೆಸೆಲ್ಸಿ ಪೂರಕ ಪರೀಕ್ಷೆ ಆರಂಭಗೊಂಡಿದ್ದು, ಮಂಗಳವಾರ ನಡೆದ ಪ್ರಥಮ ಭಾಷಾ ಪರೀಕ್ಷೆಯಲ್ಲಿ 53,414 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
7,766 ವಿದ್ಯಾರ್ಥಿಗಳು ಗೈರಾಗಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ 61,180 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಅಂಕಿ-ಅಂಶಗಳನ್ನು ಪ್ರಕಟಿಸಿದೆ.
Next Story