ಆಂತರಿಕ ಪ್ರಜಾಪ್ರಭುತ್ವ ಎಂದರೆ, ಮೋದಿ ಮುಂದೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ?: ಸಿಟಿ ರವಿಗೆ ಎಚ್.ಡಿಕೆ ತಿರುಗೇಟು
ಬೆಂಗಳೂರು: ಪರಿವಾರ ರಾಜಕಾರಣಕ್ಕೆ ಬಿಜೆಪಿ ಅತೀತವಲ್ಲ. ರಾಜ್ಯದ ಲೆಕ್ಕ ಕೊಟ್ಟಿದ್ದೇನೆ. ಭಾರತದ ಪಟ್ಟಿ ಕೊಡಲೇ? ಅಬ್ಬರ ಜಾಸ್ತಿ, ಅಭಿವೃದ್ಧಿ ನಾಸ್ತಿ. ಇದು ಬಿಜೆಪಿ ನೀತಿ. ಆಪರೇಷನ್ ದಕ್ಷಿಣ್ ಅಲ್ಲ, ಬಿಜೆಪಿ ಅಸ್ತಿತ್ವಕ್ಕೇ ಆಪರೇಷನ್ ಆಗುವ ಕಾಲ ಹತ್ತಿರದಲ್ಲೇ ಇದೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಜೆಡಿಎಸ್ʼನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ ಎಂದು ಹೇಳಿಕೆ ನೀಡಿದ್ದ ಸಿಟಿ ರವಿಗೆ ತಿರುಗೇಟಿ ನೀಡಿದ್ದಾರೆ.
'ರವಿ ಅವರೇ, ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ 'ಸತ್ತಸೊಂಟʼದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಜೀ ಜೀ ಎನ್ನುತ್ತಾ ಜೀ ಹುಜೂರ್ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ್ಯ ಕೊಟ್ಟಿದ್ದೀರಿ?' ಎಂದು ಪ್ರಶ್ನೆ ಮಾಡಿದ್ದಾರೆ.
'ಇದು ಬಿಜೆಪಿಯ ಹೊಸ ಸ್ಲೋಗನ್.!! ಹೈದರಾಬಾದ್ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾವನಾನ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು, ಜನರ ಮನಸ್ಸುಗಳನ್ನು ಒಡೆದು ʼರಾವಣ ರಾಜಕೀಯʼದ ವಿನಾಶಕಾರಿ ದಾರಿಗೆ ಹಿಡನ್ ಅಜೆಂಡಾ ಸಿದ್ಧ ಮಾಡಲಾಯಿತಾ? ಹೇಳಿ ಎಂದು ಟ್ವೀಟಿಸಿದ್ದಾರೆ.
'ಪ್ರಾದೇಶಿಕ ಪಕ್ಷಗಳನ್ನು ಎದುರಿಸಲಾಗದ ಬಿಜೆಪಿ, ಈಗ ಪರಿವಾರ ಜಪ ಮಾಡುತ್ತಿದೆ. ಅಯ್ಯೋ ಪಾಪ!! ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ನೀವು ಮುಖ್ಯಮಂತ್ರಿ ಮಾಡಿದ ಶ್ರೀ ಏಕನಾಥ ಶಿಂಧೆ ಅವರ ʼಏಕಪರಿವಾರ ಪಾಲಿಟಿಕ್ಸ್ʼ ಗೊತ್ತಿರಲಿಲ್ಲವೇ? ಬೋದನೆ ಒಂದು! ಬೋಜನ ಇನ್ನೊಂದು!! ಛೇ, ಹೇಸಿಗೆ' ಎಂದು ಟೀಕಿಸಿದ್ದಾರೆ.
'ಯಡಿಯೂರಪ್ಪ & ಸನ್ಸ್, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ಸೋಮಣ್ಣ-ಅರುಣ್ ಸೋಮಣ್ಣ, ಲಿಂಬಾಳಿ-ರಘು, ವಿಶ್ವನಾಥ್-ವಾಣಿ ವಿಶ್ವನಾಥ್, ಶೆಟ್ಟರ್-ಪ್ರದೀಪ್ ಶೆಟ್ಟರ್, ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ & ಜಾರಕಿಹೊಳಿ, ಕತ್ತಿ, ಅಂಗಡಿ, ಉದಾಸಿ ಕುಟುಂಬಗಳು.. ಇದೆಲ್ಲಾ ಏನು' ಎಂದು ಪ್ರಶ್ನಿಸಿದ್ದಾರೆ.
ಆಪರೇಷನ್ ಕಮಲದ ರಾಷ್ಟ್ರೀಕರಣ & ತುಷ್ಠೀಕರಣ. ಶಾಸಕರ ಖರೀದಿ, ಕುದುರೆ ವ್ಯಾಪಾರ, ಕರ್ನಾಟಕದ ನಂತರ ತಮಿಳುನಾಡು, ಕೇರಳ, ತೆಲಂಗಾಣ ಮತ್ತು ಆಂಧ್ರ ಪ್ರದೇಶಕ್ಕೂ ವಿಸ್ತರಿಸುವ ಡೋಂಗೀ ರಾಷ್ಟ್ರಪ್ರೇಮಿಗಳ ರಾಜಕಾರಣ. ದಕ್ಷಿಣದ ಮೇಲೆ ಆಪರೇಷನ್ ಕಮಲದ ದುರಾಕ್ರಮಣ!! ಹೌದಲ್ಲವೇ ಎಂದು ಕುಟುಕಿದ್ದಾರೆ.
ಆಪರೇಷನ್ ಕಮಲಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಒಬ್ಬರು ಬೇಕಲ್ಲವೇ? ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನೇ ಬ್ರ್ಯಾಂಡ್ ರಾಯಭಾರಿ ಮಾಡುತ್ತೀರಾ? ಕಾರ್ಯಕಾರಿಣಿಯಲ್ಲಿ ಇದೂ ಚರ್ಚೆಗೆ ಬಂತಾ? ಮೋದಿ ಸಾಹೇಬರು ಒಪ್ಪಿದರಾ? ಎಷ್ಟಾದರೂ ನಿಮ್ಮ ಅಮಿತೋತ್ಸಾಹಕ್ಕೆ ಆಪರೇಷನ್ ಕಮಲವೇ ಕಾರಣ, ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಜೆಡಿಎಸ್ʼನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲಎಂದು ಮಾನ್ಯ @CTRavi_BJP ಹೇಳಿದ್ದಾರೆ.
— H D Kumaraswamy (@hd_kumaraswamy) July 4, 2022
ರವಿ ಅವರೇ, ಆಂತರಿಕ ಪ್ರಜಾಪ್ರಭುತ್ವ ಎಂದರೆ, ನರೇಂದ್ರ ಮೋದಿ ಮುಂದೆ ʼಸತ್ತಸೊಂಟʼದವರಂತೆ ನಡುಬಗ್ಗಿಸಿ ತಲೆ ಅಲ್ಲಾಡಿಸುವುದಾ? ಜೀ ಜೀ ಎನ್ನುತ್ತಾ ಜೀ ಹುಜೂರ್ ಎನ್ನುವುದಾ? 25 ಸಂಸದರ ಯೋಗ್ಯತೆ ಏನು? ಅವರಿಗೆಷ್ಟು ಸ್ವಾತಂತ್ರ್ಯ ಕೊಟ್ಟಿದ್ದೀರಿ? 1/0 pic.twitter.com/kL5abeDtDz
ಯಡಿಯೂರಪ್ಪ & ಸನ್ಸ್, ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ, ಅಶೋಕ್-ರವಿ, ಸೋಮಣ್ಣ-ಅರುಣ್ ಸೋಮಣ್ಣ, ಲಿಂಬಾಳಿ-ರಘು, ವಿಶ್ವನಾಥ್-ವಾಣಿ ವಿಶ್ವನಾಥ್, ಶೆಟ್ಟರ್-ಪ್ರದೀಪ್ ಶೆಟ್ಟರ್, ನಿರಾಣಿ-ಹನುಮಂತ ನಿರಾಣಿ, ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್ & ಜಾರಕಿಹೊಳಿ, ಕತ್ತಿ, ಅಂಗಡಿ, ಉದಾಸಿ ಕುಟುಂಬಗಳು.. ಇದೆಲ್ಲಾ ಏನು @CTRavi_BJP ಯವರೇ? 9/10
— H D Kumaraswamy (@hd_kumaraswamy) July 4, 2022