ಮುಂದುವರಿದ ಭಾರೀ ಮಳೆ; ಕೊಡಗು ಜೆಲ್ಲೆಯ ಶಾಲೆ-ಕಾಲೇಜುಗಳಿಗೆ ಶುಕ್ರವಾರ (ಜು.8) ರಜೆ
ಮಡಿಕೇರಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.8ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ (ಜು.8) ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಆದೇಶಿಸಿದ್ದಾರೆ.
Next Story