ಭಾರಿ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಶುಕ್ರವಾರ (ಜು.8) ರಜೆ
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಭಾರಿ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಶುಕ್ರವಾರ (ಜು.8) ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಜು.8 ರಂದು ರಜೆ ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.
Next Story