ದ್ವಿತೀಯ ಪಿಯುಸಿ; ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು, ಜು.8: ಎಪ್ರಿಲ್-2022ರಲ್ಲಿ ಪರೀಕ್ಷೆ ಬರೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ದಿನಾಂಕವನ್ನು ಜು.15ರವರೆಗೆ, ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಜು.18ರವರೆಗೆ ವಿಸ್ತರಿಸಲಾಗಿದೆ.
ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಜೂ.18ರಲ್ಲಿ ಪ್ರಕಟಿಸಿತ್ತು. ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಜು.10ರವರೆಗೆ ಅವಕಾಶ ನೀಡಲಾಗಿತ್ತು. ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಜು.13ರವರೆಗೆ ನಿಗಧಿ ಮಾಡಲಾಗಿತ್ತು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
Next Story