PSI ಹಗರಣ | ಸಿಐಡಿ ವಶದಲ್ಲಿರುವ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನು ಸಂಬಂಧ: ಬಿ.ಕೆ ಹರಿಪ್ರಸಾದ್ ಪ್ರಶ್ನೆ
ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ?ಅವ್ರೇ ಗೃಹ ಸಚಿವರ ಕಚೇರಿಗೆ ಆರೋಪಿ ಗಣಪತಿ ಭಟ್ ಬರ್ತಾ ಇದ್ದಿದ್ದು ನಿಜಾನಾ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ನಾನು ಮೊದಲೇ ಹೇಳಿದ್ದೇನೆ,ಪಿಎಸೈ ಹಗರಣದ ಸೂತ್ರಧಾರಿಗಳು ಬೇರೆ ಇದ್ದಾರೆ.ಆದ್ರೆ ತನಿಖೆ ಪಾತ್ರಧಾರಿಗಳ ಸುತ್ತಲೇ ಗಿರಕಿ ಹೊಡೆಯುತ್ತಿದೆ' ಎಂದು ಹೇಳಿದ್ದಾರೆ.
'ಪಿಎಸ್ಐ ನೇಮಕಾತಿ ಹಗರಣ ನಡೆಯುತ್ತಿದ್ದ ದಿನಗಳ ಗೃಹ ಸಚಿವರ ಕಚೇರಿ, ಮನೆಯ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಗೃಹ ಸಚಿವರು ಬಹಿರಂಗ ಮಾಡುತ್ತಾರೆಯೇ ? ಜನರಿಗೆ ವದಂತಿಗಳಿಂದ ಮುಕ್ತಿ ಕೊಟ್ಟು ಪಾರದರ್ಶಕವಾಗಿರಬೇಕಾದುದು ಗೃಹ ಸಚಿವರ ಕರ್ತವ್ಯ ಅಲ್ವೇ?. ನ್ಯಾಯಾಂಗ ತನಿಖೆ ನಡೆಯದೆ ಪಿಎಸೈ ಹಗರಣಕ್ಕೆ ಮುಕ್ತಿ ಇಲ್ಲ ಎಂದು ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣ ನಡೆಯುತ್ತಿದ್ದ ದಿನಗಳ ಗೃಹ ಸಚಿವರ ಕಚೇರಿ, ಮನೆಯ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಗೃಹ ಸಚಿವರು ಬಹಿರಂಗ ಮಾಡುತ್ತಾರೆಯೇ ?
— Hariprasad.B.K. (@HariprasadBK2) July 12, 2022
ಜನರಿಗೆ ವದಂತಿಗಳಿಂದ ಮುಕ್ತಿ ಕೊಟ್ಟು ಪಾರದರ್ಶಕವಾಗಿರಬೇಕಾದುದು ಗೃಹ ಸಚಿವರ ಕರ್ತವ್ಯ ಅಲ್ವೇ @jnanedraAraga ಅವ್ರೇ.
ನ್ಯಾಯಾಂಗ ತನಿಖೆ ನಡೆಯದೆ ಪಿಎಸೈ ಹಗರಣಕ್ಕೆ ಮುಕ್ತಿ ಇಲ್ಲ...2/2