ಗುತ್ತಿಗೆದಾರ ಸಂತೋಷ್ ಸಾವು ಪ್ರಕರಣ: ತನಿಖೆ ಮೇಲೆ ಈಶ್ವರಪ್ಪ ಪ್ರಭಾವ ಆರೋಪಿಸಿ ರಾಜ್ಯಪಾಲರಿಗೆ ಮೃತನ ಪತ್ನಿ ಪತ್ರ
ಪಾರದರ್ಶಕ ತನಿಖೆಗೆ ಆಗ್ರಹ

ಬೆಳಗಾವಿ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸಲಾಗುತ್ತಿದೆ. ಪಾರದರ್ಶಕ ತನಿಖೆ ನಡೆಸಲು ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿ ಅವರ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
'ಕೇವಲ 15ದಿನದಲ್ಲಿ ಈ ಪ್ರಕರಣದಿಂದ ಆರೋಪ ಮುಕ್ತನಾಗಿ ಬರುತ್ತೇನೆಂದು ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ಹಣಬಲ,ರಾಜಕೀಯ ಬಲ ಬಳಿಸಿ ಆತ್ಮಹತ್ಯೆ ಪ್ರಕರಣ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ಹುಟ್ಟಿಕೊಂಡಿದೆ. ಪೊಲೀಸ್ ಅಧಿಕಾರಿಗಳು ಈ ಪ್ರಕರಣದ ಪ್ರತಿ ಹಂತದ ತನಿಖೆ ಸೋರಿಕೆ ಮಾಡುತ್ತಿದ್ದಾರೆ. ಈ ಮೂಲಕ ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿದೆ ಎಂದು ರಾಜ್ಯಪಾಲರಿಗೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಾಜಿ ಸಚಿವರ ಮಾತು ಗಮನಿಸಿದರೆ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ ಅನಿಸುತ್ತಿದೆ. ಕಾನೂನಿನ ಮುಂದೆ ಎಷ್ಟೇ ಪ್ರಭಾವಿಯಾದರೂ ಒಂದೇ ಸಾಭೀತುಪಡಿಸಬೇಕಿದೆ. ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ಮನವಿ ಈ ಪಾತ್ರದ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.





