ಕಲಬುರಗಿಯಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಸ್ಥಳದಲ್ಲೇ ಮೂವರು ಮೃತ್ಯು
ಕಲಬುರಗಿ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತರು ಶಾದಿಪೂರ ಗ್ರಾಮದ ಶ್ರೀಕಾಂತ್ (30), ಶಿರೋಳ್ಳಿ ಗ್ರಾಮದ ಜಗನ್ನಾಥ್ ಚಕ್ಕುಲಿ (35), ಮೆಹಬೂಬ್ ಅಲಿ (45) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅಮರ ಎಂಬವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಂಚೋಳಿ ಕಡೆಗೆ ಹಾಗೂ ಇನ್ನೊಂದು ಬೈಕ್ ಸುಲೇಪೇಟ್ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗದಿಂದ ಓಡಿಸುತ್ತಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story