KSRTC; ಟಿಕೆಟ್ ಇಲ್ಲದೆ ಪ್ರಯಾಣಿಸಿದ 3,937 ಪ್ರಯಾಣಿಕರಿಗೆ ದಂಡ
ಬೆಂಗಳೂರು, ಜು.19: ಜೂನ್ ತಿಂಗಳಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು 46,813 ವಾಹನಗಳನ್ನು ತನಿಖೆಗೊಳಪಡಿಸಿ 5,70,655ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿವೆ.
ಅದರಂತೆ 3,482 ಪ್ರಕರಣಗಳನ್ನು ಪತ್ತೆಹಚ್ಚಿ, 3,937 ಟಿಕೇಟ್ ರಹಿತ ಪ್ರಯಾಣಿಕರಿಂದ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 75,499ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ದವೂ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.
ದಂಡದಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್, ಪಾಸ್ ಪಡೆದು ಪ್ರಯಾಣ ಮಾಡಬೇಕು ಎಂದು ನಿಗಮವು ಪ್ರಕಟನೆಯಲ್ಲಿ ತಿಳಿಸಿದೆ.
Next Story