ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂಬ ಬಿ.ಎಸ್ ವೈ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
ನವದೆಹಲಿ, ಜುಲೈ 22 : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಸ್ತಾಗಲಿ ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾಜಪ ದೊಂದಿಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದರು.
Next Story