Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು...

ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂತಹ ಗಲಾಟೆಗಳಲ್ಲಿ ಕಾಣಿಸುವುದೇ ಇಲ್ಲ: ಕುಮಾರಸ್ವಾಮಿ ವಾಗ್ದಾಳಿ

''ಶಿವಮೊಗ್ಗ ಹರ್ಷ ಕೊಲೆ ನಂತರ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ ಏಕೆ?''

ವಾರ್ತಾಭಾರತಿವಾರ್ತಾಭಾರತಿ27 July 2022 5:44 PM IST
share
ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂತಹ ಗಲಾಟೆಗಳಲ್ಲಿ ಕಾಣಿಸುವುದೇ ಇಲ್ಲ: ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು, ಜು. 27: ‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ?' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೊಲೆ ಆದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಆದ ಮೇಲೆ ಬಿಜೆಪಿ ಸರಕಾರ ಮೈಮರೆತಿದ್ದು ಯಾಕೆ? ಪ್ರತಿ ಕೊಲೆ ಆದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ' ಎಂದು ಕಿಡಿಕಾರಿದ್ದಾರೆ.

‘ಈ ಮೊದಲು ಕೊಲೆಯಾಗಿದ್ದ ಮಸೂದ್ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂತಹ ಗಲಾಟೆಗಳಲ್ಲಿ ಕಾಣಿಸುವುದೇ ಇಲ್ಲ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

‘ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು' ಎಂದು ಅವರು ಕಿವಿಮಾತು ಹೇಳಿದ್ದಾರೆ.

‘ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗಡುಕ ಶಕ್ತಿಗಳ ಮುಂದೆ ಸರಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೋಳ ಹಾಕಲು ಧೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು? ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ' ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

'ಆತ್ಮಾವಲೋಕನ ಅಗತ್ಯ'

‘ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ. ಶಾಂತಿ, ಸುವ್ಯವಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂತಹ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು'

-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!3/8

— H D Kumaraswamy (@hd_kumaraswamy) July 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X