ಸಿಇಟಿ ಫಲಿತಾಂಶ ಪ್ರಕಟ: ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.30: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು(ಶನಿವಾರ) ಪ್ರಕಟಗೊಂಡಿದೆ.
ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ 2,10,829 ಅಭ್ಯರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ www.karresults.nic.in ಹಾಗೂ www.karresults.nic.in/ ವೆಬ್ಸೈಟ್ನಲ್ಲಿ ನೋಡಬಹುದು.
ಎಂಜಿನಿಯರಿಂಗ್, ಕೃಷಿ, ಪಶುಸಂಗೋಪನೆ, ಆಯುಷ್, ಯುನಾನಿ, ಫಾರ್ಮಸಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕಳೆದ ಜೂನ್ 16 ಮತ್ತು 17 ರಂದು ನಡೆದ ಸಿಇಟಿ ಪರೀಕ್ಷೆಗೆ ಒಟ್ಟು 2,10,829 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೂ.18ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
Next Story