ಕೆಎಸ್ಒಯು ವಿದ್ಯಾರ್ಥಿಗಳಿಗೆ ಅಂಕಪಟ್ಟಿ, ಪದವಿ ಪ್ರಮಾಣಪತ್ರ ವಿತರಿಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು, ಆ.5: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ(ಕೆಎಸ್ಒಯು) 2013-14 ಹಾಗೂ 2014-15ನೆ ಸಾಲಿನ ಇನ್-ಹೌಸ್ ಸಿಸ್ಟಂ(ವಿವಿಯಿಂದಲೇ ವಿದ್ಯಾರ್ಥಿಗಳಿಗೆ ನೇರ ಪ್ರವೇಶಾತಿ) ಅಡಿ ವಿವಿಧ ತಾಂತ್ರಿಕೇತರ ಕೋರ್ಸ್ಗಳಿಗೆ ನೋಂದಣಿಯಾಗಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಎರಡು ತಿಂಗಳೊಳಗೆ ಅಂಕಪಟ್ಟಿ ಹಾಗೂ ಪದವಿ ಪ್ರಮಾಣಪತ್ರ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಬಿಡದಿಯ ಗಂಗಮ್ಮ ಸೇರಿ 283 ವಿದ್ಯಾರ್ಥಿಗಳು ಸಲ್ಲಿಸಿದ್ದ 22 ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪುನ್ನು ಹೈಕೋರ್ಟ್ ಪ್ರಕಟಿಸಿದ್ದು, ಎಲ್ಲ ಅರ್ಜಿಗಳನ್ನೂ ಮಾನ್ಯ ಮಾಡಿದೆ.
ಅಂಕಪಟ್ಟಿ ಹಾಗೂ ಪದವಿ ಪ್ರಮಾಣಪತ್ರ ಪಡೆದವರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದರೆ ಅದನ್ನು ಕೆಪಿಎಸ್ಸಿ ಹಾಗೂ ಸರಕಾರ ಮತ್ತದರ ಅಧೀನ ಸಂಸ್ಥೆಗಳು ಪರಿಗಣಿಸಬೇಕೆಂದೂ ಪೀಠ ಆದೇಶಿಸಿದೆ.
Next Story