ಸಿಎಂ ಬೊಮ್ಮಾಯಿಗೆ ಕೋವಿಡ್ ದೃಢ: ದೆಹಲಿ ಪ್ರವಾಸ ರದ್ದು
ಬೆಂಗಳೂರು, ಆ.6: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಅವರ ದೆಹಲಿಯ ಪ್ರವಾಸ ರದ್ದು ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಬೊಮ್ಮಾಯಿ ಮಾಹಿತಿ ಹಂಚಿಕೊಂಡಿದ್ದಾರೆ.
''ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ'' ಎಂದು ತಿಳಿಸಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ.
— Basavaraj S Bommai (@BSBommai) August 6, 2022
Next Story